ಮುಹಮ್ಮದ್
ಇಸ್ಲಾಂ ಮತ್ತು ಬಹಾಯಿಯ ಪ್ರವಾದಿ / From Wikipedia, the free encyclopedia
ಮುಹಮ್ಮದ್ ಬಿನ್ ಅಬ್ದುಲ್ಲಾ (ಅರಬ್ಬಿ: محمد بن عبد الله)[lower-alpha 1][1] (c. 22 ಎಪ್ರಿಲ್ 571 – c. 8 ಜೂನ್ 632)[2] — ಅರಬ್ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಂದಾಳು. ಸಾಮಾನ್ಯವಾಗಿ ಇಸ್ಲಾಂ ಧರ್ಮದ ಸ್ಥಾಪಕರೆಂದು ಹೇಳಲಾಗುತ್ತದೆ.[3] ಆದರೆ ಮುಸ್ಲಿಮರ ನಂಬಿಕೆಯ ಪ್ರಕಾರ ಅಬ್ರಹಾಂ, ಮೋಶೆ, ಯೇಸು ಮುಂತಾದ ಪ್ರವಾದಿಗಳಂತೆ ದೇವರಿಂದ ಕಳುಹಿಸಲ್ಪಟ್ಟ ಅಂತಿಮ ಪ್ರವಾದಿ. ಎಲ್ಲಾ ಪ್ರವಾದಿಗಳಂತೆ ಇವರೂ ಕೂಡ ಏಕದೇವತಾವಾದ, ಪ್ರವಾದಿತ್ವ ಮತ್ತು ಪರಲೋಕದ ಬಗ್ಗೆ ಬೋಧಿಸಿದ್ದರೂ, ಇತರ ಪ್ರವಾದಿಗಳಿಗೆ ವ್ಯತಿರಿಕ್ತವಾಗಿ ಇವರನ್ನು ಸಂಪೂರ್ಣ ಮಾನವಕುಲಕ್ಕೆ ಪ್ರವಾದಿಯಾಗಿ ಕಳುಹಿಸಲಾಗಿದೆ ಎಂದು ಮುಸಲ್ಮಾನರು ನಂಬುತ್ತಾರೆ. ಇವರ ಹೆಸರನ್ನು ಹೇಳುವಾಗ, ಕೇಳುವಾಗ, ಅಥವಾ ಬರೆಯುವಾಗ ಮುಸಲ್ಮಾನರು "ಸಲ್ಲಲ್ಲಾಹು ಅಲೈಹಿ ವಸಲ್ಲಂ" ಎಂಬ ನುಡಿಗಟ್ಟನ್ನು ಸೇರಿಸುತ್ತಾರೆ. ಈ ನುಡಿಗಟ್ಟನ್ನು ಸೇರಿಸಬೇಕೆಂದು ಕುರ್ಆನ್ ಮತ್ತು ಹದೀಸ್ನಲ್ಲಿ ನಿರ್ದೇಶನವಿದೆಯೆಂದು ಹೇಳುತ್ತಾರೆ.[4]
ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ | |
---|---|
محمد | |
ವೈಯಕ್ತಿಕ | |
ಜನನ | (೫೭೧-೦೪-೨೨)೨೨ ಏಪ್ರಿಲ್ ೫೭೧ (ಹಿಜರಿ ಪೂರ್ವ 53 ರಬೀಉಲ್ ಅವ್ವಲ್ 12) |
ಮರಣ | 8 ಜೂನ್ 632(632-06-08) (ಹಿಜರಿ 11 ರಬೀಉಲ್ ಅವ್ವಲ್ 12) |
ಧರ್ಮ | ಇಸ್ಲಾಂ |
ಸಂಗಾತಿ |
|
ಮಕ್ಕಳು |
|
ಹೆತ್ತವರು |
|
This article is actively undergoing a major edit for a short while. To help avoid edit conflicts, please do not edit this page while this message is displayed. This page was last revised at ೧೫:೫೨, ೧೫ ಮೇ ೨೦೨೪ (UTC) (19798 ಸೆಕೆಂಡುಗಳು time). Please remove this template if this page hasn't been edited in several hours. If you are the editor who added this template, please be sure to remove it or replace it with {{Under construction}} between editing sessions.
|
ಮುಹಮ್ಮದ್ ಕ್ರಿ.ಶ. 570 ರಲ್ಲಿ ಅಥವಾ 571 ರಲ್ಲಿ (ಹಿಜರಿ ಪೂರ್ವ 53, ರಬೀಉಲ್ ಅವ್ವಲ್ 12 ಸೋಮವಾರ)[2] ಇಂದಿನ ಸೌದಿ ಅರೇಬಿಯಾದಲ್ಲಿರುವ ಮಕ್ಕಾ ನಗರದಲ್ಲಿ,[5] ಕುರೈಷ್ ಬುಡಕಟ್ಟಿಗೆ ಸೇರಿದ ಬನೂ ಹಾಶಿಂ ಗೋತ್ರದಲ್ಲಿ ಜನಿಸಿದರು.[3] ತಂದೆ ಅಬ್ದುಲ್ಲಾ ಬಿನ್ ಅಬ್ದುಲ್-ಮುತ್ತಲಿಬ್ ಮತ್ತು ತಾಯಿ ಆಮಿನ ಬಿಂತ್ ವಹಬ್.[6] ಮುಹಮ್ಮದ್ ಹುಟ್ಟುವುದಕ್ಕೆ ಮೊದಲೇ ತಂದೆ ಇಹಲೋಕವಾಸ ಮುಗಿಸಿದ್ದರು.[6] ಆರು ವರ್ಷವಾಗುವಷ್ಟರಲ್ಲಿ ತಾಯಿ ಕೂಡ ಇಹಲೋಕಕ್ಕೆ ವಿದಾಯಕೋರಿದರು.[3] ತಬ್ಬಲಿ ಮುಹಮ್ಮದ್ರನ್ನು ಅಜ್ಜ ಅಬ್ದುಲ್ ಮುತ್ತಲಿಬ್ ಸಾಕಿದರು. ಮುಹಮ್ಮದ್ಗೆ ಎಂಟು ವರ್ಷವಾದಾಗ ಅಜ್ಜ ಕೂಡ ದೈವಾಧೀನರಾದರು.[3] ಚಿಕ್ಕ ಹುಡುಗ ಮುಹಮ್ಮದ್ರ ಪಾಲನೆ-ಪೋಷಣೆಯ ಜವಾಬ್ದಾರಿಯನ್ನು ಅವರ ದೊಡ್ಡಪ್ಪ ಅಬೂ ತಾಲಿಬ್ ವಹಿಸಿಕೊಂಡರು.[7][8]
ಮುಹಮ್ಮದ್ ಚಿಕ್ಕಂದಿನಲ್ಲಿ ಕುರಿ ಮೇಯಿಸುವ ವೃತ್ತಿ ಮಾಡುತ್ತಿದ್ದರು. ನಂತರ ಅವರು ವ್ಯಾಪಾರ ಮಾಡಲು ಶುರು ಮಾಡಿದರು. ಮುಸಲ್ಮಾನರ ನಂಬಿಕೆ ಪ್ರಕಾರ 40ನೇ ವಯಸ್ಸಿನಲ್ಲಿ ಅವರಿಗೆ ದೇವರಿಂದ ದಿವ್ಯವಾಣಿ (ವಹೀ) ಅವತೀರ್ಣವಾಯಿತು. ಅವರು ಪ್ರವಾದಿಯಾಗಿ ಆರಿಸಲ್ಪಟ್ಟರು.[9] ನಂತರ ಅವರು ಮಕ್ಕಾದಲ್ಲಿ ಹದಿಮೂರು ವರ್ಷ ಧರ್ಮಪ್ರಚಾರ ಮಾಡಿದರು. ಈ ಅವಧಿಯಲ್ಲಿ ಅವರು ಮಕ್ಕಾದ ಜನರಿಂದ ನಿರಂತರ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಬೇಕಾಯಿತು. ಅವರ ಕುಟುಂಬಕ್ಕೆ ಮೂರು ವರ್ಷಗಳ ಕಾಲ ಸಾಮೂಹಿಕ ಬಹಿಷ್ಕಾರ ಹಾಕಲಾಯಿತು.[10] ಹಿಂಸೆ ತೀವ್ರ ಸ್ವರೂಪ ಪಡೆದು ಜನರು ಅವರನ್ನು ಕೊಲ್ಲುವ ಹಂತಕ್ಕೆ ಬಂದಾಗ, ಕ್ರಿ. ಶ. 622 ರಲ್ಲಿ ತಮ್ಮ 53ನೇ ವಯಸ್ಸಿನಲ್ಲಿ ಅವರು ಮಕ್ಕಾದಿಂದ ಸುಮಾರು 400 ಮೈಲು ಉತ್ತರದಲ್ಲಿರುವ ಮದೀನಾ ನಗರಕ್ಕೆ ವಲಸೆ ಹೋದರು.[11]
ಮುಹಮ್ಮದ್ ತಮ್ಮ ಧರ್ಮಪ್ರಚಾರವನ್ನು ಮದೀನಾದಲ್ಲಿ ಮುಂದುವರಿಸಿದರು. ಅಲ್ಲಿನ ಜನರು ಇಸ್ಲಾಂ ಧರ್ಮದಿಂದ ಆಕರ್ಷಿತರಾದರು. ಮುಹಮ್ಮದ್ ಮದೀನಾದಲ್ಲಿ ಇಸ್ಲಾಮೀ ನಾಗರಿಕತೆಗೆ ಅಡಿಪಾಯ ಹಾಕಿದರು. ಒಂದು ಬಲಿಷ್ಠ ಸಾಮ್ರಾಜ್ಯವನ್ನು ಕಟ್ಟಿದರು. ಕೆಲವೇ ವರ್ಷಗಳಲ್ಲಿ ಸಂಪೂರ್ಣ ಅರೇಬಿಯನ್ ಪರ್ಯಾಯ ದ್ವೀಪವು ಅವರ ಅಧೀನಕ್ಕೆ ಬಂತು. ಕ್ರಿ. ಶ. 632 ರಲ್ಲಿ (ಹಿಜರಿ 11 ರಬೀಉಲ್ ಅವ್ವಲ್ 12 ಸೋಮವಾರ) ತಮ್ಮ 63ನೇ ವಯಸ್ಸಿನಲ್ಲಿ ಅವರು ಇಹಲೋಕಕ್ಕೆ ವಿದಾಯಕೋರಿದರು.[12]