From Wikipedia, the free encyclopedia
ಕೋಲಾರ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು ಇದನ್ನು ಮೊದಲು ಕುವಲಾಲಪುರ ಅಂತಲೂ ಕರೆಯುತ್ತಿದ್ದರು. ಕಾಲ ಕ್ರಮೇಣ ಕೋಲಾರವಾಯಿತು. ಗಂಗರು ಕಟ್ಟಿಸಿದಂತ ಹಲವಾರು ಸ್ಥಳಗಳು ಕೋಲಾರದಲ್ಲಿ ಮತ್ತು ಕೋಲಾರ ಜಿಲ್ಲೆಯಲ್ಲಿವೆ ಅದರಲ್ಲೂ ಮುಖ್ಯವಾಗಿ ಗಂಗರು ಕಟ್ಟಿಸಿದ ಕೋಲಾರಮ್ಮ ದೇವಾಲಯ ಜಿಲ್ಲೆಯಲ್ಲಿಯೆ ಪ್ರಸಿದ್ದಿಯನ್ನು ಪಡೆದಿದೆ.[1]
ಕೋಲಾರ | |
ಸೋಮೇಶ್ವರ ದೇವಾಲಯ | |
ರಾಜ್ಯ - ಜಿಲ್ಲೆ |
ಕರ್ನಾಟಕ - ಕೋಲಾರ |
ನಿರ್ದೇಶಾಂಕಗಳು | |
ವಿಸ್ತಾರ | km² |
ಸಮಯ ವಲಯ | IST (UTC+5:30) |
ಜನಸಂಖ್ಯೆ - ಸಾಂದ್ರತೆ |
- /ಚದರ ಕಿ.ಮಿ. |
ನಾಡಿಗೆ ಮತ್ತು ರಾಷ್ಟ್ರಕ್ಕೆ ತನ್ನೊಡಲ ಚಿನ್ನವನ್ನು ಧಾರೆಯೆರೆದು ‘ಚಿನ್ನದ ನಾಡು’ ಎಂದೇ ಹೆಸರಾಗಿದ್ದ ಕೋಲಾರ ಜಿಲ್ಲೆಯು ನಾಡಿನ ಕೃಷಿ, ಸಾಹಿತ್ಯ, ರಾಜಕೀಯ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆ ನೀಡಿದ ಗೌರವಕ್ಕೆ ಪಾತ್ರವಾಗಿದೆ. ಸಿಲ್ಕ್ ಅಂಡ್ ಮಿಲ್ಕ್, ಹಣ್ಣು ಮತ್ತು ತರಕಾರಿಗಳ ರಾಜಧಾನಿ ಎನಿಸಿರುವ ಕೋಲಾರ ಜನಪದ ಹೋರಾಟಗಳು ಮತ್ತು ಜನಪದ ಸಂಸ್ಕೃತಿಯನ್ನು ಮೆರೆದಿದೆ . ಆಗಸ್ಟ್ ೨೦೦೭ರಂದು ಚಿಕ್ಕಬಳ್ಳಾಪುರ ಉಪವಿಭಾಗವು ಸ್ವತಂತ್ರ ಜಿಲ್ಲೆಯಾಗಿ ಕೋಲಾರದಿಂದ ವಿಭಜನೆ ಹೊಂದಿದೆ.ಕೋಲಾರ ಜಿಲ್ಲೆಯ ಮುಖ್ಯ ಕಸುಬುಗಳೆಂದರೆ ಕೃಷಿ, ಪಶು ಸಾಕಾಣಿಕೆ ಹಾಗೂ ರೇಷ್ಮೆ ಉದ್ಯಮ. ಶಿವಾರ ಪಟ್ಟಣ ಕಲ್ಲಿನಿಂದ ಕೆತ್ತಿರುವ ಶಿಲ್ಪಕಲೆಗೆ ಪ್ರಖ್ಯಾತಿ.ಕೋಲಾರನ್ನು ಚಿನ್ನದ ಗಣಿ ಎಂದು ಸಹ ಕರೆಯುತ್ತಾರೆ
ಐತಿಹಾಸಿಕವಾಗಿ ಕೋಲಾರವು ೨ ನೇ ಶತಮಾನದಲ್ಲಿಯೇ ಗಂಗರ ರಾಜಧಾನಿಯಾಗಿದ್ದು, ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿದೆ. ೪ ರಿಂದ ೧೯ ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು.
೨೦೨೧ ರ ಆದಾರ್ ನೊಂದಣಿ ಪ್ರಕಾರ, ಕೋಲಾರ ಜಿಲ್ಲೆಯ ಜನಸಂಖ್ಯೆಯು ೧೬,೫೩,೩೨೦ ಆಗಿದೆ ಹಾಗೂ ೨೦೧೧ ರ ಜನಗಣತಿಯ ಪ್ರಕಾರ ೧೫,೩೬,೪೧೧. ಇದರಲ್ಲಿ ಪುರುಷರ ಸಂಖ್ಯೆ ೭೭೬,೩೯೬ ಹಾಗು ಸ್ತೀಯರ ಸಂಖ್ಯೆ ೭೬೦,೦೦೫ ಇದೆ .[2]
ಸಾಹಿತ್ಯ, ಸಂಸ್ಕೃತಿ ಹಾಗೂ ರಾಜಕೀಯ ಕ್ಷೇತ್ರಗಳಿಗೆ ವಿಶೇಷ ಕೊಡುಗೆ ನೀಡಿರುವ ಈ ಜಿಲ್ಲೆಯು ನಾಡಿನ ಮೊದಲ ಮುಖ್ಯಮಂತ್ರಿ ಕೆ.ಚಂಗಲರಾಯರೆಡ್ಡಿ ಅವರನ್ನು ಕೊಟ್ಟ ಹೆಗ್ಗೆಳಿಕೆಗೆ ಪಾತ್ರವಾಗಿದೆ.
ಕೋಲಾರ ಜಿಲ್ಲೆಯಲ್ಲಿರುವ ಕೆಲವು ಚಾರಿತ್ರಿಕ ಸ್ಥಳಗಳೆ೦ದರೆ[3]
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.