ಹಾಲು
ಹಾಲು ಹೆಣ್ಣು ಸಸ್ತನಿಗಳ ಸ್ತನಗ್ರಂಥಿಗಳಲ್ಲಿ ಉತ್ಪತ್ತಿಯಾಗುವ ಒಂದು ಅಪಾರದರ್ಶಕ ಬಿಳಿ ದ್ರವ. / From Wikipedia, the free encyclopedia
ಹಾಲು ಹೆಣ್ಣು ಸಸ್ತನಿಗಳ ಸ್ತನಗ್ರಂಥಿಗಳಲ್ಲಿ ಉತ್ಪತ್ತಿಯಾಗುವ ಒಂದು ಅಪಾರದರ್ಶಕ ಬಿಳಿ ದ್ರವ. ಸ್ತನಗ್ರಂಥಿಗಳು ಅತಿ ವಿಶಿಷ್ಟ ಸಿಹಿ ಗ್ರಂಥಿಗಳಾಗಿವೆ. ಸಸ್ತನಿ ಪ್ರಾಣಿಗಳ (ಮಾನವನೂ ಸೇರಿದಂತೆ) ಹೆಣ್ಣುಗಳ ಹಾಲಿನ ಉತ್ಪಾದನಾ ಸಾಮರ್ಥ್ಯವು ಈ ಗುಂಪಿನ ಬಲು ಮುಖ್ಯ ಜೈವಿಕ ಗುಣವಾಗಿದೆ. ಹಾಲು ನವಜಾತ ಶಿಶುಗಳಿಗೆ ಅತ್ಯುತ್ತಮ ಪೋಷಕಾಂಶಗಳನ್ನು ಒದಗಿಸುವುದು. ಶಿಶು(ಮರಿ)ಗಳು ಬೇರೆ ಆಹಾರವನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯ ಪಡೆಯುವವರೆಗೂ ತಾಯಹಾಲೇ ಏಕೈಕ ಆಹಾರ. ಶಿಶುವಿನ ಜನನದ ಅಲ್ಪಕಾಲದಲ್ಲಿಯೇ ಉತ್ಪತ್ತಿಯಾಗುವ ಹಾಲು ತಾಯಿಯ ದೇಹದಿಂದ ಪ್ರತಿಕಣಗಳನ್ನು ಶಿಶುವಿನ ದೇಹಕ್ಕೆ ಒಯ್ಯುತ್ತದೆ. ಶಿಶುವಿಗೆ ಇದು ಅನೇಕ ರೋಗಗಳನ್ನು ತಡೆಗಟ್ಟುವ ಶಕ್ತಿಯನ್ನು ನೀಡುವುದು. ಹಾಲಿನಲ್ಲಿನ ಅಂಶಗಳು ಬೇರೆಬೇರೆ ಪ್ರಾಣಿಗಳಲ್ಲಿ ವಿಭಿನ್ನವಾಗಿರುತ್ತವೆ. ಸಾಮಾನ್ಯವಾಗಿ ಸಾಂದ್ರ ಕೊಬ್ಬು, ಪ್ರೊಟೀನ್, ಕ್ಯಾಲ್ಸಿಯಮ್ ಮತ್ತು ವಿಟಮಿನ್-ಸಿ ಗಳು ಗಣನೀಯ ಪ್ರಮಾಣದಲ್ಲಿರುತ್ತವೆ.