ಕುವೆಂಪು ವಿಶ್ವವಿದ್ಯಾಲಯ

ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯ From Wikipedia, the free encyclopedia

Remove ads

ಕುವೆಂಪು ವಿಶ್ವವಿದ್ಯಾನಿಲಯ - ಕರ್ನಾಟಕ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳಲ್ಲಿ ಒಂದು. ಇದರ ಧ್ಯೇಯವಾಕ್ಯ ವಿಶ್ವಮಾನವ ಪರಿಕಲ್ಪನೆಯನ್ನು ಒಳಗೊಂಡಿದೆ. ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಠಿ ಎಂಬ ಮಾತುಗಳೊಂದಿಗೆ ಲಾಂಛನವನ್ನು ಮಾಡಲಾಗಿದೆ.[]

Quick facts ಹಿಂದಿನ ಹೆಸರು‍, ಧ್ಯೇಯ ...
Remove ads

ಪರಿಚಯ

ಈ ವಿಶ್ವವಿದ್ಯಾನಿಲಯವನ್ನು ಕನ್ನಡ ಸಾಹಿತ್ಯಲೋಕದ ಅಗ್ರಗಣ್ಯರಲ್ಲೊಬ್ಬರಾದ, ಜ್ಞಾನಪೀಠ ಪ್ರಶಸ್ತಿ ವಿಜೇತ, ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ೧೯೮೭ನೇ ಇಸ್ವಿ ಜೂನ್ ೨೯ರಂದು ಪ್ರಾರಂಭಿಸಲಾಯಿತು. ಇದರ ಮೊದಲ ಕುಲಪತಿಗಳು ಲೇಖಕರಾದ ಶಾಂತಿನಾಥ ದೇಸಾಯಿ ಅವರು. ಮಲೆನಾಡಿನ ಪ್ರಕೃತಿ ಮಡಿಲಲ್ಲಿರುವ ಜ್ಞಾನ ಸಹ್ಯಾದ್ರಿ ಪ್ರಾಂಗಣದಲ್ಲಿ ಈ ವಿಶ್ಯವಿದ್ಯಾನಿಲಯ ಸ್ಥಾಪಿತವಾಗಿದೆ. ಈ ಪ್ರಾಂಗಣವು ಭದ್ರಾ ನದಿಯ ಹತ್ತಿರವಿದ್ದು, ಶಿವಮೊಗ್ಗದಿಂದ ೨೮ಕಿ.ಮೀ. ದೂರದಲ್ಲಿಯೂ, ಭದ್ರಾವತಿಯ ಕೈಗಾರಿಕಾ ಪಟ್ಟಣದಿಂದ ೧೮ ಕಿ.ಮೀ ದೂರದಲ್ಲಿಯೂ ಇರುವ ಶಂಕರಘಟ್ಟ ಎಂಬ ಗ್ರಾಮಕ್ಕೆ ಹೊಂದಿಕೊಂಡಿದೆ. ತರೀಕೆರೆಯಿಂದ ೧೮ ಕಿ.ಮೀ ದೂರದಲ್ಲಿದೆ. ಈ ವಿಶ್ವವಿದ್ಯಾಲಯದ ಕುರಿತಾದ ಗೀತೆಯನ್ನು ಕನ್ನಡದ ಪ್ರೇಮ ಕವಿ ಎಂದೇ ಖ್ಯಾತರಾದ ಕೆ.ಎಸ್. ನರಸಿಂಹಸ್ವಾಮಿಯವರು ರಚಿಸಿದ್ದಾರೆ.

Remove ads

ಉಲ್ಲೇಖಗಳು

Loading related searches...

Wikiwand - on

Seamless Wikipedia browsing. On steroids.

Remove ads