ಕನ್ನಡ ಅಕ್ಷರಮಾಲೆ

ಬ್ರಾಹ್ಮ ಕುಟುಂಬದ ಅಬುಗಿಡ ಬರವಣಿಗೆ ವ್ಯವಸ್ಥೆ From Wikipedia, the free encyclopedia

Remove ads

ಅಶೋಕಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ.

  • ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ. ಈ ಲಿಪಿ ಎಡದಿಂದ ಬಲಕ್ಕೆ ಬರೆಯಲ್ಪಟ್ಟಿದ್ದು ಅದರಲ್ಲಿಯ ಸರಳ ಸುಂದರ, ಅಕ್ಷರಗಳು ಸುಲಭವಾಗಿ ಗುರುತಿಸುವಂತಿವೆ. ಈ ಅಕ್ಷರಗಳಿಗೆ ತಲೆಕಟ್ಟು ಇರುವುದಿಲ್ಲ. ಥ, ಪ, ಮ, ವ. ಲ, ಹ ಮುಂತಾದ ಅಕ್ಷರಗಳ ಬುಡಕಟ್ಟು ದುಂಡಾಗಿರುತ್ತವೆ.
  • ಸಂಸ್ಕೃತ ಭಾಷೆಯ ಋ, ವಿಸರ್ಗ, ಜಿಹ್ವಾ ಮೂಲೀಯ ಮತ್ತು ಉಪಧ್ಮಾನೀಯಗಳನ್ನು ನಿರ್ದೇಶಿಸುವ ಸಂಜ್ಞೆಗಳಿರುವುದಿಲ್ಲ. ಅದರಂತೆ ಪದಾದಿಯ ದೀರ್ಘ ಈ ಕಾರವಿಲ್ಲ. ಕರ್ಣಾಟಕದಲ್ಲಿ ಅಶೋಕನ ಬಾಹ್ಮೀ ಲಿಪಿಯ ಶಾನಗಳು ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಸಿದ್ದಾಪುರ ಮತ್ತು ಜಟಿಂಗ ರಾಮೇಶ್ವರ ಎಂಬ ಸ್ಥಳಗಳಲ್ಲಿಯೂ ರಾಯಚೂರು ಜಿಲ್ಲೆಯ ಮಸ್ಕಿ, ಪಾಲ್ಕಗುಂಡು ಮತ್ತು ಗವಿಮಠ ಎಂಬ ಸ್ಥಳಗಳಲ್ಲಿಯೂ ದೊರೆತಿವೆ.
  • ಅಶೋಕನ ಬ್ರಾಹ್ಮೀ ಲಿಪಿ ಮುಂದೆ 3ನೆಯ ಶತಮಾನದ ವರೆಗೆ ಶುಂಗ, ಕುಶಾನ, ಕ್ಷತ್ರಪ, ಆಂಧ್ರ, ಶಾತವಾಹನ ಮುಂತಾದ ಅರಸರ ಶಾಸನಗಳಲ್ಲಿ ಭಾರತದ ಬೇರೆ ಬೇರೆ ಭಾಗಗಳಲ್ಲಿ ವಿಕಾಸ ಹೊಂದಿರುತ್ತದೆ. ಕುಶಾನ ಕಾಲದ ಲಿಪಿಯ ಅಕ್ಷರಗಳು ಕಡಿಮೆ ಎತ್ತರವಾಗಿಯೂ ಅಗಲವಾಗಿಯೂ ದಪ್ಪವಾಗಿಯೂ ಇರುತ್ತವೆ. ಕ್ಷತ್ರಪ ಹಾಗೂ ಶಾತವಾಹನರ ಕಾಲದ ಲಿಪಿಗಳೂ ಹೆಚ್ಚು ಕಡಿಮೆ ಇದೇ ವೈಶಿಷ್ಟ್ಯಗಳನ್ನೊಳಗೊಂಡಿವೆ.
  • ಕರ್ಣಾಟಕದಲ್ಲಿ ಅಶೋಕನ ಬ್ರಾಹ್ಮೀ ಲಿಪಿಯ ಮುಂದಿನ ಹಂತವನ್ನು 2-3ನೆಯ ಶತಮಾನದ ಮಳವಳ್ಳಿ ಮತ್ತು ಬನವಾಸಿಯ ಸಾತಕರ್ಣಿಯ ಶಾಸನಗಳಲ್ಲಿ ಕಾಣುತ್ತೇವೆ. ಇಲ್ಲಿಯೂ ಅಕ್ಷರಗಳ ಎತ್ತರ ಕಡಿಮೆಯಾಗಿದ್ದು ಕೆಲವು ಅಕ್ಷರಗಳಿಗೆ ತ್ರಿಕೋಣಾಕೃತಿಯುಳ್ಳ ತಲೆಕಟ್ಟು ಇರುತ್ತದೆ. ಅಗಲವಾದ ತುದಿಯುಳ್ಳ ಲೇಖನಿಯನ್ನು ಉಪಯೋಗಿಸಿದ್ದರಿಂದ ಇಂಥ ತಲೆಕಟ್ಟುಗಳು ತಲೆದೋರಿವೆಯೆಂದು ಕೆಲವು ವಿದ್ವಾಂಸರು ಹೇಳುತ್ತಾರೆ.
  • ಅ, ಕ, ರ ಮುಂತಾದ ಅಕ್ಷರಗಳ ಲಂಬರೇಖೆಯ ಕೆಳಭಾಗ ವೃತ್ತಾಕಾರವಾಗಿ ಎಡಗಡೆ ಹೊರಳಿದೆ. ಇತ್ತೀಚೆಗೆ ಗುಲ್ಬರ್ಗಾ ಜಿಲ್ಲೆಯ ಸನ್ನತಿ ಎಂಬ ಸ್ಥಳದಲ್ಲಿ ದೊರೆತ 3ನೆಯ ಶತಮಾನದ ಶಾನಗಳಲ್ಲಿಯ ಕೆಲವು ಅಕ್ಷರಗಳು ಆಂಧ್ರಪ್ರದೇಶದ ನಾಗಾರ್ಜುನ ಕೊಂಡದ ಇಕ್ಷ್ವಾಕು ಅರಸರ ಶಾಸನಗಳ ಅಕ್ಷರಗಳಂತೆ ಸುಂದರವಾಗಿಯೂ ಅಂಕಾರಯುತವಾಗಿಯೂ ಕೆತ್ತಲ್ಪಟ್ಟಿವೆ.
Remove ads

10-12ನೆಯ ಶತಮಾನ

  • ಕನ್ನಡ ಲಿಪಿ 10-12ನೆಯ ಶತಮಾನದಲ್ಲಿ ಕಲ್ಯಾಣಿ ಚಾಳುಕ್ಯರ ಶಾಸನಗಳಲ್ಲಿ ವಿಶೇಷ ಬದಲಾವಣೆಯನ್ನು ಹೊಂದಿ ಒಂದು ಮುಖ್ಯವಾದ ಹಂತವನ್ನು ಸೂಚಿಸುತ್ತಿವೆ. ಈ ಕಾಲದ ಕೆಲವು ಅಕ್ಷರಗಳು ಇನ್ನಷ್ಟು ದುಂಡಾಗಿದ್ದು ಆಧುನಿಕ ಕನ್ನಡ ಲಿಪಿಯ ಅಕ್ಷರಗಳ ಲಕ್ಷಣಗಳನ್ನು ವ್ಯಕ್ತಪಡಿಸುತ್ತದೆ. ಉದಾಹರಣೆಗಾಗಿ ಕ, ರ, ಯ ಮುಂತಾದ ಅಕ್ಷರಗಳ ಮೈಕಟ್ಟು ಹೆಚ್ಚು ಕಡಿಮೆ ಈಗಿನಂತೆಯೇ ಇದೆ. ಕೆಲವು ಅಕ್ಷರಗಳ ತಲೆಕಟ್ಟು ಕೋನಾಕೃತಿಯುಳ್ಳದಾಗಿದೆ.
  • ಚ, ವ, ಮ ಮುಂತಾದ ಅಕ್ಷರಗಳ ತಲೆಕಟ್ಟಿನ ಭಾಗ ಎರಡು ಭಾಗವಾಗಿ ಬೇರ್ಪಡೆಯಾಗಿದ್ದು ತಲೆಕಟ್ಟು ಬಲಭಾಗದ ರೇಖೆಗೆ ಹೊಂದಿ ಕೊಂಡಿರುತ್ತದೆ. ಅನೇಕ ಅಕ್ಷರಗಳ ತಲೆಕಟ್ಟು ಸ್ಪಷ್ಟವಾಗಿ ಎದ್ದುಕಾಣುವಂತಿದೆ. ಮುಂದೆ 12-13ನೆಯ ಶತಮಾನದಲ್ಲಿ ಹೊಯ್ಸಳ ಅರಸರ ಅನೇಕ ಶಾಸನಗಳನ್ನು ನುಣುಪಾದ ಕಲ್ಲಿನ ಹಲಗೆಗಳ ಮೇಲೆ ಅಲಂಕಾರಯುತವಾಗಿಯೂ ಕಲಾತ್ಮಕವಾಗಿಯೂ ಬರೆಯಲ್ಪಟ್ಟಿದ್ದು ಅಲ್ಲಿಯ ಅಕ್ಷರಗಳು ಬಹು ಸುಂದರವಾಗಿ ಕಾಣುತ್ತವೆ.
  • ಈ ಅಕ್ಷರಗಳನ್ನು ಸ್ಪಷ್ಟವಾಗಿಯೂ ಹೆಚ್ಚು ದುಂಡಾಗಿಯೂ ಬರೆಯಲಾಗಿದೆ. ಇಲ್ಲಿ ಕನ್ನಡ ಲಿಪಿ ಊರ್ಜಿತಾವಸ್ಥೆಯನ್ನು ಹೊಂದಿದೆಯೆಂದು ಹೇಳಬಹುದು. ಆದರೆ ಮುಂದಿನ 2-3 ಶತಮಾನಗಳ ಕಾಲದಲ್ಲಿ ಅಂದರೆ 14-16ನೆಯ ಶತಮಾನದ ವಿಜಯನಗರ ಅರಸರ ಶಾಸನಗಳಲ್ಲಿ ಅಕ್ಷರಗಳನ್ನು ಡೊಂಕು ಡೊಂಕಾಗಿ ಬರೆಯಲಾಗಿದ್ದು ಅವುಗಳ ಜೋಡಣೆಯ ವಿಷಯದಲ್ಲಿ ಅಷ್ಟು ಗಮನವನ್ನಿತ್ತಿಲ್ಲ.
  • ಆದುದರಿಂದ ಕಲ್ಯಾಣಿ ಚಾಳುಕ್ಯ ಹಾಗೂ ಹೊಯ್ಸಳರ ಕಾಲದ ಲಿಪಿಯ ಅಕ್ಷರಗಳಂತೆ ವಿಜನಗರ ಕಾಲದ ಲಿಪಿಯ ಅಕ್ಷರಗಳು ಅಂದವಾಗಿ ಕಾಣುವುದಿಲ್ಲ. ಆದರೂ ಈ ಕಾಲದ ಲಿಪಿಯ ಅಕ್ಷರಗಳು ಕನ್ನಡ ಲಿಪಿಯ ಬೆಳೆವಣಿಗೆಯ ದೃಷ್ಟಿಯಿಂದ ಗಮನಾರ್ಹವಾಗಿದೆ. ಅ, ಞ, ಣ, ಷ, ಳ ಮುಂತಾದ ಅಕ್ಷರಗಳು ಈಗಿನ ರೂಪಗಳನ್ನು ಹೆಚ್ಚಾಗಿ ಹೋಲುತ್ತವೆ.
  • ದ, ಡ, ಪ ಮುಂತಾದ ಅಲ್ಪಪ್ರಾಣದ ಅಕ್ಷರಗಳಿಗೆ ಕೆಳಗಡೆ ಒಂದು ರೇಖೆಯನ್ನು ಸೇರಿಸಿ ಧ, ಢ, ಫ, ಮುಂತಾದ ಮಹಾಪ್ರಾಣಗಳ ಸಂಜ್ಞೆಗಳನ್ನು ಸೂಚಿಸಲಾಗಿದೆ. ಇದುವರೆಗೆ ಅಕ್ಷರಗಳ ಮೇಲ್ಭಾಗದಲ್ಲಿ ಒಂದು ಚುಕ್ಕೆ ಅಥವಾ ಚಿಕ್ಕ ಬಿಂದುವಿನಿಂದ ಸೂಚಿಸಲ್ಪಡುತ್ತಿದ್ದ ಅನುಸ್ವಾರವನ್ನು ಆಯಾ ಅಕ್ಷರಗಳ ಬಲಗಡೆಗೆ ಅಷ್ಟೇ ಗಾತ್ರದ ಬಿಂದುವಿನಿಂದ ತೋರಿಸಲಾಗಿದೆ.
  • 18ನೆಯ ಶತಮಾನದಲ್ಲಿ ಮೈಸೂರು ಅರಸರ ಕಾಲದಲ್ಲಿ ಕನ್ನಡ ಲಿಪಿ ವಿಜಯನಗರ ಕಾಲದ ಅಕ್ಷರಗಳ ಕೆಲವು ಲಕ್ಷಣಗಳನ್ನು ಉಳಿಸಿಕೊಂಡಿದ್ದರೂ ಆಧುನಿಕ ಕನ್ನಡ ಲಿಪಿಗೆ ಬಹಳ ಹತ್ತಿರಬಾಗಿ ತೋರುತ್ತದೆ. ಇತ್ತೀಚೆಗೆ ಮುದ್ರಣ ಬಂದಮೇಲೆ ಇತರ ಲಿಪಿಗಳಂತೆ ಕನ್ನಡ ಲಿಪಿಯಾದರೂ ಒಂದು ಸ್ಥಿರತೆಯನ್ನು ಹೊಂದಿದ್ದರಿಂದ ಹೆಚ್ಚಿನ ವಿಕಾಸಕ್ಕೆ ಅಸ್ಪದವಿಲ್ಲದಂತಾಗಿದೆ. ಆದರೂ ಮುದ್ರಣದ ಲಿಪಿಯಲ್ಲಿ ಸಹ ಕಾಲಕಾಲಕ್ಕೆ ಕೆಲವು ಸುಧಾರಣೆಗಳನ್ನು ಮಾಡಿಕೊಂಡು ಹೆಚ್ಚಿನ ಅಂದವಾದ ಅಕ್ಷರಗಳನ್ನು ಅಚ್ಚು ಹಾಕುತ್ತಿರುವುದನ್ನು ನೋಡುತ್ತೇವೆ.
Remove ads

ಪರಿಣಾಮ

  • ಕನ್ನಡ ಲಿಪಿಯ ಒಂದು ವೈಶಿಷ್ಟ್ಯವೆಂದರೆ ಪ್ರಾಚೀನಕಾಲದಿಂದಲೂ ಕಾಗುಣಿತಾಕ್ಷರದ ಹೃಸ್ವ ಮತ್ತು ದೀರ್ಘ ಎ ಮತ್ತು ಏ ಕಾರಗಳನ್ನು ಹಾಗೂ ಒ ಮತ್ತು ಓ ಕಾರಗಳನ್ನು ಒಂದೇ ಸಂಜ್ಞೆಯಿಂದ ಸೂಚಿಸುತ್ತಿದ್ದು ಅವುಗಳಲ್ಲಿಯ ಹೃಸ್ವ ಮತ್ತು ದೀರ್ಘ ವರ್ಣಗಳ ಭೇದವನ್ನು ಸಂದರ್ಭಾನುಸಾರವಾಗಿ ತಿಳಿದುಕೊಳ್ಳಬೇಕಾಗಿತ್ತು.
  • ಇತ್ತೀಚೆಗೆ ಅಂದರೆ 17-18ನೆಯ ಶತಮಾನದಂದೀಚೆಗೆ ಮಾತ್ರ ಕಾಗುಣಿತಾಕ್ಷರದ ದೀರ್ಘ ಏ ಕಾರ, ದೀರ್ಘ, ಓ ಕಾರ ಮತ್ತು ದೀರ್ಘ ಈ ಕಾರಗಳನ್ನು ಆಯಾ ಅಕ್ಷರಗಳ ಬಲಗಡೆ ಕೋಡಿಯುಳ್ಳ ಒಂದು ರೇಖೆಯಿಂದ ಸೂಚಿಸಲಾಗಿದೆ.

ಇನ್ನು 4-5ನೆಯ ಶತಮಾನದಿಂದ 13-14ನೆಯ ಶತಮಾನದವರೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಶಾಸನಗಳಲ್ಲಿ ಸುಮಾರು ಒಂದೇ ಮಾದರಿಯ ಲಿಪಿಯನ್ನು ಉಪಯೋಗಿಸಿದ್ದುದರಿಂದ ಇವೆರಡೂ ಭಾಗದ ಲಿಪಿಗಳಿಗೆ ಕನ್ನಡ ತೆಲುಗು ಲಿಪಿಯೆಂದು ಹೇಳುವುದುಂಟು. ಅದರಲ್ಲೂ ವಿಶೇಷವಾಗಿ ಬಾದಾಮಿ ಚಳುಕ್ಯ, ರಾಷ್ಟ್ರಕೂಟ ಮತ್ತು ಕಲ್ಯಾಣಿ ಚಾಳುಕ್ಯರ ಕಾಲದ ಕನ್ನಡ ತೆಲುಗು ಲಿಪಿ ಒಂದೇ ಸ್ವರೂಪದ್ದಾಗಿದೆಯೆಂದು ಹೇಳಬಹುದು.

  • 14-15ನೆಯ ಶತಮಾನಗಳಲ್ಲಿ ಕನ್ನಡ ಮತ್ತು ತೆಲುಗು ಲಿಪಿಗಳಲ್ಲಿ ಕೆಲವು ವ್ಯತ್ಯಾಸಗಳು ತಲೆದೋರಿದ್ದು ಮುಂದಿನ ಎರಡು ಮೂರು ಶತಮಾನಗಳಲ್ಲಿ ಗಮನಾರ್ಹವಾದ ಭೇದಗಳು ಕಂಡುಬರುತ್ತವೆ. ಆದರೂ ಅಲ್ಪ ಪ್ರಯತ್ನದಿಂದ ಕನ್ನಡಿಗರು ತೆಲುಗು ಲಿಪಿಯನ್ನೂ ಅದರಂತೆ ಆಂಧ್ರರು ಕನ್ನಡ ಲಿಪಿಯನ್ನೂ ಸುಲಭವಾಗಿ ತಿಳಿದುಕೊಳ್ಳಬಹುದು. ಬಾದಾಮಿ ಚಳುಕ್ಯರ ಕಾಲದಲ್ಲ ಕನ್ನಡ ಲಿಪಿ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರಾಂತ್ಯಗಳಲ್ಲಿಯೂ ಪ್ರಚಲಿತವಿದ್ದು ಮುಂದೆ ಅಲ್ಲಿ ನಾಗರೀ ಲಿಪಿ ಬಳಕೆಗೆ ಬಂತು. * ಅಂತೂ ಮೇಲಿನ ವಿವೇಚನೆಯಿಂದ ಕನ್ನಡ ಲಿಪಿ ಸು. 2000 ವರ್ಷಕ್ಕೂ ಹೆಚ್ಚಿನ ಪರಂಪರೆಯುಳ್ಳದ್ದಾಗಿದೆಯೆಂದು ವಿಶದವಾಗುತ್ತದೆ. ಒಂದು ಲಿಪಿಯ ಹುಟ್ಟು ಮತ್ತು ಬೆಳೆವಣಿಗೆ ಅದನ್ನು ಉಪಯೋಗಿಸುವ ಜನರ ಸಂಸ್ಕೃತಿಯ ಪ್ರತೀಕವಾಗಿರುತ್ತದೆ. ಒಂದು ಆದರ್ಶ ಲಿಪಿಯಲ್ಲಿ ಪ್ರತಿಯೊಂದು ಶಬ್ದದ ಉಚ್ಚಾರಣೆಗೆ ಅಸಂದಿಗ್ಧವಾದ ಸಂಜ್ಞೆಯಿರಬೇಕು. ಬರೆದಂತೆ ಓದುವಂತಿರಬೇಕು. ಓದಿದಂತೆ ಬರೆಯುವಂತೆಯೂ ಇರಬೇಕು.
  • ಅಂದರೆ ಉಚ್ಚಾರಿತ ಅಕ್ಷರ ಹಾಗೂ ಲಿಖಿತ ವರ್ಣ ಇವುಗಳ ಸಂಬಂಧ ಸಂಪುರ್ಣವಿರಬೇಕು. ಈ ದೃಷ್ಟಿಯಿಂದ ವಿಚಾರಿಸಿದರೆ ಕನ್ನಡ ಲಿಪಿ ಪರಿಪುರ್ಣತೆಯನ್ನು ಪಡೆದಿದೆಯೆಂದು ಹೇಳಬಹುದು. ಈ ಲಿಪಿಯಲ್ಲಿ ಸ್ವರ ಮತ್ತು ವ್ಯಂಜನಗಳು ಪುರ್ಣವಾಗಿದ್ದು ಆರ್ಯ ಮತ್ತು ದ್ರಾವಿಡ ಭಾಷೆಗಳ ಧ್ವನಿಗಳನ್ನು ಕೊರತೆಯಿಲ್ಲದೆ ಸೂಚಿಸಲಿಕ್ಕೆ ಉಪಯುಕ್ತವಾದ ಸಂಕೇತಗಳಿವೆ. ವ್ಯಂಜನಾಕ್ಷರಗಳೊಡನೆ ಸ್ವರಗಳ ಸುಂದರವಾದ ಸಂಯೋಗವಿದೆ.
  • ಹೀಗೆ ಕನ್ನಡ ಲಿಪಿ ಅಶೋಕನ ಬ್ರಾಹ್ಮೀಲಿಪಿಯಿಂದ ಉದ್ಬವಿಸಿ ಕಾಲಕ್ರಮದಿಂದ ಅನೇಕ ಮಾರ್ಪಾಟುಗಳನ್ನು ಹೊಂದಿ ವೈವಿಧ್ಯಪುರ್ಣವಾದ ವಿಕಾಸವನ್ನು ಪಡೆದು ಸಾಹಿತ್ಯ-ಸಂಸ್ಕೃತಿಗಳ ಹಿರಿಮೆಯನ್ನು ವ್ಯಕ್ತಪಡಿಸುತ್ತದೆ. ಕನ್ನಡ ವರ್ಣಮಾಲೆಯ ಪ್ರತಿಯೊಂದು ಅಕ್ಷರದ ಉಗಮ, ವಿಕಾಸ, ಉಚ್ಚಾರಣೆ ಮುಂತಾದ ವಿವರಗಳು ಆಯಾ ಅಕ್ಷರಗಳ ಶೀರ್ಷಿಕೆಗಳಲ್ಲಿ ಬಂದಿವೆ. ಅವನ್ನು ನೋಡಬಹುದು.[] ಈಚೆಗೆ ಪರಭಾಷೆಯ ಪದಗಳನ್ನು ಎರವಲಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಒದಗಿಬಂದುದರಿಂದ ಈಚಿಣheಡಿ, ಈಚಿisಚಿಟ, Zoo, ಒಚಿಟಿ ಮೊದಲಾದುವನ್ನು; ಬರೆಯಲು ವಿಶಿಷ್ಟ ಸಂಜ್ಞೆಗಳನ್ನು ಬಳಸಲಾಗುತ್ತಿದೆ. ಉದಾ : ಫಾದರ್, ಫೈಸಲ್ ಜóÆ, ಮ್ಯಾನ್-ಹೀಗೆ.
Remove ads

ಸಂಜ್ಞಾ ಪ್ರಕರಣ

ಕೇಶಿರಾಜನ ಸೂತ್ರದ ಪ್ರಕಾರ, ಅಕ್ಷರ ಮಾಲೆ/ವರ್ಣಮಾಲೆ ಎಂಬುದು ಒಂದು ಸಂಜ್ಞಾ ಪ್ರಕಾರವಾಗಿದೆ.[]

ಕವಿಗಳ್ ಸ್ವರದಿಂ ವರ್ಗದಿ

ನವರ್ಗದಿಂ ಯೋಗವಾಹದಿಂ ದೇಶಿಯಳು

ದ್ಭವಮಪ್ಪ ವರ್ಣದಿಂ ಪಂ

ಚ ವಿಧಂ ತಾನೆಂದು ತಿಳಿಸುವರ್ ಶುದ್ಧಗೆಯಂ

(ಸೂತ್ರ ವಿವರಣೆ:ಕವಿಗಳು ಸ್ವರದಿಂದ, ವರ್ಗಾಕ್ಷರಗಳಿಂದ, ಅವರ್ಗೀಯ ಅಕ್ಷರಗಳಿಂದ, ಯೋಗವಾಹ ಅಕ್ಷರದಿಂದದಿಂದ, ಮತ್ತು ದೇಶಿಯ ಅಕ್ಷರಗಳಿಂದ ಹುಟ್ಟಿರುವ ಐದು ವಿಧದ ಅಕ್ಷರಗಳನ್ನು ಶುದ್ಧಗೆ ಎಂದು ಹೇಳುತ್ತಾರೆ) (ಸೂತ್ರಸಂಖ್ಯೆ – ೪೧)[]

ಕನ್ನಡದ ಶುದ್ಧಾಕ್ಷರಗಳ ವಿಧಗಳು

ಕೇಶಿರಾಜನ ಪ್ರಕಾರ ಕನ್ನಡ ಶುದ್ಧಗೆಯಲ್ಲಿ ಐದು ವಿಧಗಳು. ಅವುಗಳು ಕ್ರಮವಾಗಿ : ಸ್ವರ ಅಕ್ಷರಗಳು, ವರ್ಗೀಯ ವ್ಯಂಜನ ಅಕ್ಷರಗಳು, ಅವರ್ಗೀಯ ವ್ಯಂಜನ ಅಕ್ಷರಗಳು, ಯೋಗವಾಹ ಅಕ್ಷರಗಳು, ದೇಶಿಯ ಅಕ್ಷರಗಳು. ಆದರೆ ಕನ್ನಡ ಪಠ್ಯಾನುಸಾರ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿಗಳು ಒಟ್ಟು ಕನ್ನಡ ಅಕ್ಷರಗಳನ್ನು ಈ ಕೆಳಗಿನಂತೆ ಗ್ರಹಿಸಿಕೊಂಡಿದ್ದಾರೆ.

More information ಶುದ್ಧಾಕ್ಷರ ವಿಧಗಳು, ಗಣನೆ ...


ಈ ರೀತಿ ಕನ್ನಡದಲ್ಲಿ ೫೧ ಅಕ್ಷರಗಳಿವೆ. ಪ್ರಸ್ತುತ ಕನ್ನಡದಲ್ಲಿ ಬಳಸುತ್ತಿರುವುದು ೪೯ ಅಕ್ಷರಗಳು.

More information ಕನ್ನಡ ಅಕ್ಷರಮಾಲೆ ...
Remove ads

ಕನ್ನಡ ವರ್ಣಮಾಲೆ

ಕನ್ನಡ ವರ್ಣಮಾಲೆಯಲ್ಲಿ ೪೯ಅಕ್ಷರಗಳಿವೆ. ಅವುಗಳನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ.

  1. ಸ್ವರಗಳು -೧೩
  2. ವ್ಯಂಜನಗಳು -೩೪
  3. ಯೋಗವಾಹಗಳು-೦೨

ಸ್ವರ

ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬರುವ ವರ್ಣಮಾಲೆಯ ಮೊದಲ ಹದಿಮೂರು ಅಕ್ಷರಗಳನ್ನು ಸ್ವರ ಎಂದು ಕರೆಯುತ್ತಾರೆ. ಸ್ವರಗಳಲ್ಲಿ ಎರಡು ವಿಧ. ಅವು ಯಾವುವೆಂದರೆ ಹೃಸ್ವ ಸ್ವರಗಳು ಹಾಗೂ ದೀರ್ಘ ಸ್ವರ

  • ಹೃಸ್ವ ಸ್ವರ

ಹೃಸ್ವ ಸ್ವರಗಳು (೬)ಆರು. ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ ಆರು ಅಕ್ಷರಗಳನ್ನು(ಅ,ಇ ಉ,ಋ,ಎ,ಒ) ಹೃಸ್ವ ಸ್ವರಗಳೆಂದು ಕರೆಯುವರು.

  • ದೀರ್ಘ ಸ್ವರ

ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ (೭)ಏಳು ಅಕ್ಷರಗಳನ್ನು (ಆ,ಈ,ಊ,ಏ.ಐ.ಓ,ಔ) ದೀರ್ಘ ಸ್ವರಗಳೆಂದು ಕರೆಯುವರು.

ವ್ಯಂಜನ

ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬಾರದ ವರ್ಣಮಾಲೆಯ(೩೪) ಮುವತ್ತು ನಾಲ್ಕು ಅಕ್ಷರಗಳನ್ನು ವ್ಯಂಜನಗಳೆಂದು ಕರೆಯುವರು. ಪ್ರಮುಖವಾಗಿ ವ್ಯಂಜನಗಳಲ್ಲಿ ಎರಡು ವಿಧ. ಅವು ಯಾವುವೆಂದರೆ ವರ್ಗೀಯ ವ್ಯಂಜನಗಳು(೨೫: ಕ,ಚ,ಟ,ತ,ಪ-ವರ್ಗಗಳು) ಮತ್ತು ಅವರ್ಗೀಯ ವ್ಯಂಜನಗಳು(೯-ಯ ಇಂದ ಳ ವರೆಗೆ)

  • ವರ್ಗೀಯ ವ್ಯಂಜನ

ಒಂದು ವರ್ಗ ಅಥವಾ ಗುಂಪಿಗೆ ಸೇರಿಸಬಹುದಾದ ವರ್ಣಮಾಲೆಯ ಇಪ್ಪತ್ತೈದು(೨೫) ಅಕ್ಷರಗಳನ್ನು ವರ್ಗೀಯ ವ್ಯಂಜನ ಎಂದು ಕರೆಯುವರು. ಅವು ಯಾವುವೆಂದರೆ,

  1. ಕ-ವರ್ಗ = ಕ, ಖ, ಗ, ಘ, ಙ
  2. ಚ-ವರ್ಗ = ಚ, ಛ, ಜ, ಝ, ಞ
  3. ಟ-ವರ್ಗ = ಟ, ಠ, ಡ, ಢ, ಣ
  4. ತ-ವರ್ಗ = ತ, ಥ, ದ, ಧ, ನ
  5. ಪ-ವರ್ಗ = ಪ, ಫ, ಬ, ಭ, ಮ
  • ಅವರ್ಗೀಯ ವ್ಯಂಜನ

ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ. ಅವು ಯಾವುವೆಂದರೆ-

ಯ,ರ,ಲ,ವ,ಶ,ಷ,ಸ,ಹ,ಳ.

ಕನ್ನಡ ಒತ್ತಕ್ಷರಗಳು

ಕನ್ನಡ ಒತ್ತಕ್ಷರಗಳು (೩೪)ಮುವತ್ನಾಲ್ಕು. ಅವು ಯಾವುವೆಂದರೆ:

  1. ಕ್ಕ ಖ್ಖ ಗ್ಗ ಘ್ಘ ಙ್ಙ
  2. ಚ್ಚ ಛ್ಛ ಜ್ಜ ಝ್ಝ ಞ್ಞ
  3. ಟ್ಟ ಠ್ಠ ಡ್ಡ ಢ್ಢ ಣ್ಣ
  4. ತ್ತ ಥ್ಥ ದ್ದ ಧ್ಧ ನ್ನ
  5. ಪ್ಪ ಫ್ಫ ಬ್ಬ ಭ್ಭ ಮ್ಮ
  6. ಯ್ಯ ರ್ರ ಲ್ಲ ವ್ವ ಶ್ಶ ಷ್ಷ ಸ್ಸ ಹ್ಹ ಳ್ಳ

ಯೋಗವಾಹಗಳು

ಸ್ವತಂತ್ರವಲ್ಲದ ಹಾಗೂ ಸ್ವರವೂ ಅಲ್ಲದ,ವ್ಯಂಜನವೂ ಅಲ್ಲದ ಸ್ವರಾಕ್ಷರಗಳ ಅಂತ್ಯದಲ್ಲಿನ ಹಾಗೂ ವ್ಯಂಜನಗಳ ಆರಂಭಾಕ್ಷರಗಳ ನಡುವಿನ ಎರಡು ಅಕ್ಷರಗಳನ್ನು (ಅನುಸ್ವಾರ-೦,ವಿಸರ್ಗ-ಃ)ಯೋಗವಾಹಗಳೆಂದು ಕರೆಯುತ್ತಾರೆ.

  • ಕರ್ನಾಟಕ ಸರ್ಕಾರವು ತನ್ನ ಪಠ್ಯ ಕ್ರಮದಿಂದ ಸ್ವರವನ್ನು ಕನ್ನಡ ವರ್ಣಮಾಲೆಯಿಂದ ೧೯೯೦ ರಲ್ಲಿ ಬಿಟ್ಟಿತು.
  • ಹಳೆಗನ್ನಡದ ಮೂರು ಅಕ್ಷರಗಳಾದ , ಮತ್ತು ನ್(ನ್, ಯುನಿಕೋಡ್ - U+0CDD) ಇವನ್ನು ಇಂದು ಹೆಚ್ಚಾಗಿ ಬಳಸುತ್ತಿಲ್ಲವಾದರೂ ಹಳೆಗನ್ನಡವನ್ನು ಓದಲು ಇವನ್ನು ತಿಳಿದಿರಬೇಕು.
  • ಇಂಗ್ಲಿಷ್‌F ಮತ್ತು Z ಅಕ್ಷರಗಳಿಗೆ ಫ಼ ಮತ್ತು ಜ಼ (ಫ ಮತ್ತು ಜ) ಹೊಸ ಅಕ್ಷರಗಳು ಉಪಯೋಗಕ್ಕೆ ಬಂದಿವೆ. ಆದರೆ ಅವುಗಳನ್ನು ಕನ್ನಡ ವರ್ಣಮಾಲೆಯಲ್ಲಿ ಸೇರಿಸಿಲ್ಲ.
Remove ads

ಸ್ವರಗಳು

  • ಕನ್ನಡದಲ್ಲಿ ಒಟ್ಟು ೧೩ ಸ್ವರಗಳಿವೆ. ಅವನ್ನು "ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ" ಹೀಗೆ 'ಅ'ಕಾರದಿಂದ ಮೊದಲು ಮಾಡಿ, 'ಔ'ಕಾರದ ವರೆಗೆ ಕೊನೆ ಮಾಡಿ, ಹೀಗೆ ಬರೆಯುವುದು ಸಂಸ್ಕೃತ ವ್ಯಾಕರಣದ ಅನುಕರಣೆ. ಸಂಸ್ಕೃತದಲ್ಲಿ ಈ ಬಗೆಯಲ್ಲಿ ಬರೆಯಲು ಕಾರಣ ಅದರ ಮಾಹೇಶ್ವರ ಸೂತ್ರ ಮತ್ತು ಸಂಧಿನಿಯಮಗಳು.
  • ಆದರೆ ಹೀಗೆ ಬರೆಯುವುದರಿಂದ ಕನ್ನಡದ ಸಂಧಿನಿಯಮಗಳನ್ನು ಅರಿಯಲು ಯಾವ ಅನುಕೂಲವೂ ಆಗುವುದಿಲ್ಲವೆಂಬ ಅಭಿಪ್ರಾಯವಿದೆ. "ಇ ಈ ಎ ಏ ಉ ಊ ಒ ಓ ಅ ಆ" ಎಂದು ಇನ್ನೊಂದು ಬಗೆಯಲ್ಲಿಯೂ ಬರೆಯುವುದುಂಟು. ಇಲ್ಲಿ ಸ್ವರಗಳನ್ನು ನಾಲಗೆಯ ತುದಿಯಿಂದ ಕೊನೆಯ ತನಕ ಅವುಗಳು ಹೊರಡುವ ನಾಲಗೆಯ ಭಾಗಕ್ಕೆ ಅನುಕ್ರಮವಾಗಿ ಬರೆಯಲಾಗಿದೆ.
  • ಅಂದರೆ "ಇ ಈ" ನಾಲಗೆಯ ತುತ್ತುದಿಯಿಂದ ಉಲಿದರೆ, "ಅ ಆ" ನಾಲಗೆಯ ಕಟ್ಟಕಡೆಯಲ್ಲಿ ಹೊರಡುವುದು. ೠ, ಱ, ೞ ಗಳನ್ನು ಬಿಟ್ಟಮಾತ್ರಕ್ಕೆ ಆ ಅಕ್ಷರಗಳು ಕನ್ನಡದಲ್ಲಿ ಇಲ್ಲ ಅಥವಾ ಜನರಿಗೆ ಉಚ್ಚರಿಸಲಾಗದೆಂದು ಹೇಳಲಾಗದು.

ಸ್ವರಗಳಲ್ಲಿ ನಾಲ್ಕು ವಿಧ

  • ಹೃಸ್ವಸ್ವರ/ಗಿಡ್ಡಸ್ವರ : ಒಂದು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ಹೃಸ್ವ ಅಂದರೆ ಚಿಕ್ಕದು. ಒಂದು ಹ್ರಸ್ವ ಸ್ವರವನ್ನು ಉಳಿಯಲು (ಉಚ್ಚಾರ ಮಾಡಲು) ಬರಿ ಒಂದು ಮಾತ್ರೆಯಷ್ಟು( ಒಂದು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು ) ಹೊತ್ತು ಬೇಕಾಗುವುದು. ಹೃಸ್ವ ಸ್ವರಗಳು : ಅ ಇ ಉ ಋ ಎ ಒ
  • ದೀರ್ಘಸ್ವರ/ಉದ್ದಸ್ವರ.  : ಎರಡು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ದೀರ್ಘ ಅಂದರೆ ಉದ್ದದ್ದು ಎಂದು. ಒಂದು ದೀರ್ಘ ಸ್ವರವನ್ನು ಉಲಿಯಲು ಎರಡು ಮಾತ್ರೆಯಷ್ಟು(ಎರಡು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು) ಹೊತ್ತು ಬೇಕಾಗುವುದು. ದೀರ್ಘ ಸ್ವರಗಳು: ಆ ಈ ಊ ಏ ಐ ಓ ಔ
  • ಪ್ಲುತ ಸ್ವರ : ಮೂರು ಇಲ್ಲವೆ, ಅದಕ್ಕಿಂತ ಹೆಚ್ಚು ಮಾತ್ರೆಗಳ ಹೊತ್ತು ಉಳಿಯುವ ಸ್ವರ.
  • ಸಂಧ್ಯಕ್ಷರ : ಎರಡು ಸ್ವರಗಳಿಂದ ಉಂಟಾಗುವ ಅಕ್ಷರಗಳು. ಐ, ಔ, ಏ, ಓ
Remove ads

ಯೋಗವಾಹಗಳು

ಸ್ವತಂತ್ರವಾಗಿ ಪ್ರಯೋಗಿಸಲಾಗದೆ, ಯಾವುದಾದರು ಸ್ವರದೊಂದಿಗೆ ಮಾತ್ರ ಪ್ರಯೋಗ ಮಾಡಬಹುದಾದ ಅಕ್ಷರಗಳು. ಕನ್ನಡ ವರ್ಣಮಾಲೆಯಲ್ಲಿ ನಾಲ್ಕು ಯೋಗವಾಹಗಳಿದ್ದರೂ ಎರಡು ಯೋಗವಾಹಗಳು ಮಾತ್ರ ಬಳಕೆಯಲ್ಲಿವೆ.

  1. ಅನುಸ್ವಾರ/ಬಿಂದು (ಅಂ) ಮತ್ತು
  2. ವಿಸರ್ಗ (ಅಃ)
  3. ಉಪಾಧ್ಮಾನೀಯ ‍: ೲ
  4. ಜಿಹ್ಹಾಮೂಲೀಯ : ೱ

ಉದಾಹರಣೆಗೆ: ವಿವಿಧ ಸ್ವರಗಳೊಡನೆ ಅನುಸ್ವಾರ: ಅಂಜೂರ, ಆಂಧ್ರ, ಇಂಚರ, ಉಂಗುರ, ಎಂಬತ್ತು, ಒಂಟೆ, ಓಂಕಾರ
ಕನ್ನಡದಲ್ಲಿ ಪದದ ನಡುವಿನಲ್ಲಿ ಬರುವ ಅನುನಾಸಿಕ ವ್ಯಂಜನಗಳ ಅರ್ಧಾಕ್ಷರ (ನ್, ಮ್ ಮುಂತಾದವು) ಬದಲು ಅನುಸ್ವರವನ್ನು ಬಳಸುವುದುಂಟು.
ಉದಾ:

  • ಅಙ್ಕ = ಅಂಕ ( ಇದನ್ನು ಅಮ್ಕ ಎಂದು ಉಲಿಯಬಾರದು )
  • ಅಞ್ಚೆ = ಅಂಚೆ
  • ತಙ್ಗಿ = ತಂಗಿ
  • ಗಣ್ಟೆ = ಗಂಟೆ
  • ಅನ್ದ = ಅಂದ
  • ಅಮ್ಬ = ಅಂಬ
  • ವಿವಿಧ ಸ್ವರಗಳೊಡನೆ ವಿಸರ್ಗ: ಅಂತಃಕರಣ, ದುಃಖ
Remove ads

ಕನ್ನಡ ಅಕ್ಷರಗಳ ಉಚ್ಚಾರಣೆ

ಐಪಿಎ ನಕಾಶೆ

More information ಪ್ರಯತ್ನ ನಿಯಮಾವಳಿ, ಕಂಠ್ಯ ...
More information ಮುಂದೆ, ಮಧ್ಯ ...

ಕೂಡುಸ್ವರಗಳು - ಐ ಔ

More information ಕನ್ನಡ, ದೇವನಾಗರಿ ...
Remove ads

ಕನ್ನಡ ಅಕ್ಷರಗಳನ್ನು ಬರೆಯುವ ವಿಧಾನ

More information ಅಕ್ಷರ, ಅಕ್ಷರ ಚಿತ್ರಸಂಚಲನೆ Animation ...

ವ್ಯಂಜನಗಳು

ವ್ಯಂಜನಗಳಲ್ಲಿ ಎರಡು ವಿಧ. ವರ್ಗೀಯ ವ್ಯಂಜನ ಮತ್ತು ಅವರ್ಗೀಯ ವ್ಯಂಜನ. 'ಕ' ಅಕ್ಷರದಿಂದ 'ಮ' ಅಕ್ಷರದವರೆಗೆ ವರ್ಗೀಯ ವ್ಯಂಜನಗಳು. ಇದರಲ್ಲಿ ಐದು ವರ್ಗಗಳು. ಕ ವರ್ಗ, ಚ ವರ್ಗ, ಟ ವರ್ಗ, ತ ವರ್ಗ ಮತ್ತು ಪ ವರ್ಗ. 'ಯ' ಅಕ್ಷರದಿಂದ 'ಳ' ಅಕ್ಷರದವರೆಗೆ ಅವರ್ಗೀಯ ವ್ಯಂಜನಗಳು. ಪ್ರತಿ ವ್ಯಂಜನಕ್ಕೆ ಎರಡು ಸ್ವರಗಳಿವೆ:

  1. ಅಲ್ಪಪ್ರಾಣ: ಕ (ಕ್+ಅ)
  2. ಮಹಾಪ್ರಾಣ: ಕಾ (ಕ್+ಆ')

ಸಾಮಾನ್ಯ ವರ್ಣಮಾಲೆಯಲ್ಲಿ (ಅಕ್ಷರಮಾಲೆಯಲ್ಲಿ) ದೀರ್ಘ ಸ್ವರವು ಉಪಯೋಗವಾಗುತ್ತದೆ.

ಕನ್ನಡದ ಗುಣಿತಾಕ್ಷರಗಳು

More information ಅ, ಆ ...

ಕನ್ನಡ ಗುಣಿತಾಕ್ಷರಗಳ ಚಿತ್ರಸಂಚಲನೆಯನ್ನು (ಅನಿಮೇಶನ್) ವೀಕ್ಷಿಸಲು ಕೆಳಗಿನ ಬಾಕ್ಸ್‍ನಲ್ಲಿ ನೀಡಿರುವ ಕೊಂಡಿಯನ್ನು ಕ್ಲಿಕ್ ಮಾಡಿ.

ಗುಣಿತಾಕ್ಷರ ಮತ್ತು ಒತ್ತಕ್ಷರ

ಕನ್ನಡದಲ್ಲಿ ಪ್ರತಿಯೊಂದು ವ್ಯಂಜನಗಳಿಗೂ ಪ್ರತ್ಯೇಕ ಒತ್ತಕ್ಷರಗಳಿವೆ. ಅವುಗಳು ಹೀಗಿವೆ;

More information ಕ, ಖ ...

ಸಂಯುಕ್ತಾಕ್ಷರಗಳಲ್ಲಿ ಎರಡು ವಿಧಗಳಿವೆ.

ಕನ್ನಡ ಒತ್ತಕ್ಷರಗಳ ಚಿತ್ರಸಂಚಲನೆಯನ್ನು (ಅನಿಮೇಶನ್) ವೀಕ್ಷಿಸಲು ಕೆಳಗಿನ ಬಾಕ್ಸ್‍ನಲ್ಲಿ ನೀಡಿರುವ ಕೊಂಡಿಯನ್ನು ಕ್ಲಿಕ್ ಮಾಡಿ.

Remove ads

ಅವರ್ಗೀಯ ವ್ಯಂಜನ ಎಂದರೇನು?ಅವು ಎಷ್ಟಿವೆ?

ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ. ಅವು ಯಾವುವೆಂದರೆ-ಯ,ರ,ಲ,ವ,ಶ,ಷ,ಸ,ಹ,ಳ.

ನೋಡಿ

ಹೊರಸಂಪರ್ಕ

  • ಕರ್ನಾಟಕ ಜನಾಂಗದ ಮೊತ್ತಮೊದಲ ಬರಹ ಭಾಷೆ, ಪ್ರಾಕೃತ; ಲಿಪಿ, ಬ್ರಾಹ್ಮೀ. ಇಲ್ಲಿಯ ಜನಾಂಗಕ್ಕೆ ಇವನ್ನು ಪರಿಚಯಿಸಿದವನು, ಕ್ರಿ.ಪೂ. ಮೂರನೆಯ ಶತಮಾನದಲ್ಲಿ ಪಾಟಲೀಪುತ್ರ (ಬಿಹಾರ ರಾಜ್ಯ)ದಿಂದ ಆಳುತ್ತಿದ್ದ ಮೌರ್ಯಚಕ್ರವರ್ತಿ ಅಶೋಕ. ಒಂದು ಭಾಷೆ ಮತ್ತು ಒಂದು ಲಿಪಿಯ ಮೂಲಕ ಈತನು ಬೆಸೆದ ದಖ್ಖಣವು ಸುಮಾರು ಆರು ಶತಮಾನಗಳ ಕಾಲ (ಕ್ರಿ.ಪೂ. 3ರಿಂದ ಕ್ರಿ.ಶ. 3ರವರೆಗೆ) ಈ ಮಾಧ್ಯಮಗಳ ಮೂಲಕವೇ ಸಂಭಾಷಿಸಿತು.[]

ಉಲ್ಲೇಖಗಳು

Loading related searches...

Wikiwand - on

Seamless Wikipedia browsing. On steroids.

Remove ads